Friday, June 2, 2023

Latest Posts

ಸಂಸದ ಡಿ.ಕೆ.ಸುರೇಶ್ ಮತ್ತು ಎಸ್. ರವಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ರಾಮನಗರ :

ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರವಿಯವರನ್ನು ಬಂಧಿಸುವಂತೆ ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಡೀಸಿ ಕಚೇರಿ ಮುಂಭಾಗ ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆಯಲ್ಲಿ ಧರಣಿ ಕುಳಿತ ಕಾರ್ಯಕರ್ತರು, ಸೋಮವಾರ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಲು ಮುಖ್ಯ ಮಂತ್ರಿಗಳು ಬಂದಿದ್ದ ಸಂದರ್ಭದಲ್ಲಿ ಅವರಿಗೆ ಅವಮಾನ ಮಾಡುವ ಉದ್ದೇಶದಿಂದಲೇ ಕಾಂಗ್ರೆಸ್ ಗೂಂಡಾಗಿರಿ ಮಾಡಿದ್ದಾರೆ ಎಂದು ದೂರಿದ್ದಾರೆ.
ಸೋಮವಾರದ ಘಟನೆಗೆ ಡಿ‌.ಕೆ.ಸುರೇಶ್ ಕಾರಣ ಅವರನ್ನು ಬಂಧಿಸಿ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!