ಬಿಜೆಪಿಯ ಹಿರಿಯ ನಾಯಕ ಎಸ್​ಎಂ ಕೃಷ್ಣ ನಿವಾಸಕ್ಕೆ ಡಿಕೆ ಸುರೇಶ್ ಭೇಟಿ: ಮಹತ್ವದ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸಹೋದರ ಡಿಕೆಶಿ ಸೇರಿದಂತೆ ಹಿರಿಯರ ಆಶೀರ್ವಾದದೊಂದಿಗೆ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಡಿಕೆ ಸುರೇಶ್ ಅವರು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕರೂ ಆಗಿರುವ ಎಸ್.ಎಂ. ಕೃಷ್ಣ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿರುವುದು ಭಾರೀ ಕುತೂಹಲ ಮೂಡಿಸಿದೆ.

ಎಸ್.ಎಂ. ಕೃಷ್ಣ ಅವರ ಭೇಟಿಯ ಕುರಿತು ಡಿಕೆ ಸುರೇಶ್ ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಇಂದು ಕರ್ನಾಟಕದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ. ಅವರ ವರ್ಷಗಳ ರಾಜಕೀಯ ಅನುಭವ ಮತ್ತು ಸಾಮಾನ್ಯ ಸಲಹೆಗಳು ನನಗೆ ಮತ್ತಷ್ಟು ಸ್ಫೂರ್ತಿ ನೀಡಿವೆ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!