ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಭೇಟಿ ನೀಡಿ, ಎಲೆಕ್ಟ್ರಿಕ್ ವಾಹನದಲ್ಲಿ ಕಾವೇರಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು.
ಬೃಂದಾವನ ಗಾರ್ಡನ್ಸ್, ನೃತ್ಯ ಕಾರಂಜಿ ಸೇರಿದಂತೆ ಹಲವೆಡೆ ಡಿಸಿಎಂ ಭೇಟಿ ನೀಡಿದರು. ಅವರೊಂದಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಡಿಸಿ ಡಾ. ಕುಮಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಡಿಕೆಶಿಗೆ ಸಾಥ್ ನೀಡಿದರು.