Monday, August 15, 2022

Latest Posts

ದ.ಕ. ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸಲು ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ ಸ್ಥಾನವಾಗಿದೆ. ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವುದರಿಂದ ಜನರು ತಮ್ಮ ದಿನನಿತ್ಯದ ವ್ಯವಹಾರ ನಡೆಸಲು ಸಹಕಾರಿಯಾಗಲಿದೆ. ಕೈಗಾರಿಕೋದ್ಯಮ, ವೃತ್ತಿಪರ ನೌಕರರು, ದಿನಕೂಲಿ ಕೂಲಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು, ಬಸ್ ನೌಕರರು, ಸಣ್ಣಪುಟ್ಟ ಉದ್ಯಮ ಸೇರಿದಂತೆ ಇನ್ನಿತರ ವರ್ಗದ ಜನರು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಸಾರ್ವಜನಿಕ ವಲಯದ ಮನವಿಯ ಮೇರೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.
ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತೆಯ ದೃಷ್ಟಿಯಿಂದ ಕೋವಿಡ್ ನಿಯಮಗಳನ್ನು ಸ್ವಯಂಪ್ರೇರಿತರಾಗಿ ಪಾಲಿಸಿ ಕೋವಿಡ್ ನಿಯಂತ್ರಣಕ್ಕಾಗಿ ಕೈಜೋಡಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss