ಸಿಎಂ ವಿರುದ್ಧದ ಪ್ರಾಸಿಕ್ಯೂಷನ್​ ವಿವಾದದ ನಡುವೆ ಊಟದಲ್ಲಿ ಜೊತೆಯಾದ ಡಿಕೆಶಿ, ಗೆಹ್ಲೋಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್;

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್​ ಪುತ್ರ ಸಂಜಯ್​ ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್​ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥವು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಬುಧವಾರ ಜರುಗಿದೆ.

ಇದೇ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್​ ಹಾಗೂ ರಾಜ್ಯಪಾಲರಾದ ಥಾವರ್​ ಚೆಂದ್​ ಗೆಹ್ಲೋಟ್​​ ಜತೆಯಾಗಿ ಕುಳಿತು ಊಟ ಮಾಡಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ದಂಪತಿ, ಸಚಿವ ಎಂ.ಸಿ. ಸುಧಾಕರ್, ಶಾಸಕ ಶರತ್​ ಬಚ್ಚೇಗೌಡ ಸೇರಿದಂತೆ ಅನೇಕರು ಪಾಲ್ಗೊಂಡು ಹಸಮಣೆ ಏರಲಿರುವ ನವಜೋಡಿಗೆ ಶುಭಹಾರೈಸಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ವಿಚಾರ ರಾಜಭವನ ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿತ್ತು. ಈ ಸಂಬಂಧ ಮಾತನಾಡಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್​ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದೀಗ ಸಚಿವ ಬೈರತಿ ಸುರೇಶ್​ ಅವರ ಮಗನ ನಿಶ್ಚಿತಾರ್ಥದಲ್ಲಿ ಈ ಇಬ್ಬರು ಮುಖಾಮುಖಿಯಾಗಿದ್ದು, ಒಟ್ಟಿಗೆ ಕುಳಿತು ಭೋಜನ ಮಾಡಿದ್ದಾರೆ. ಭೋಜನದ ನಂತರ ಇಬ್ಬರು ಆತ್ಮೀಯವಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!