ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಬುಸಾಬ್ ಪಾಳ್ಯ ಕಟ್ಟಡ ಅನಾಹುತದ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟಡಗಳ ಕುರಿತು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅನಧಿಕೃತ ಕಟ್ಟಡಗಳನ್ನು ತೆರವು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದು, ಸೋಮವಾರದಿಂದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಮೂರು ದಿನಗಳ ಹಿಂದೆ ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಅನಾಹುತದ ನಂತರ ನಗರದಲ್ಲಿ ಅನಧಿಕೃತ ಹಾಗೂ ಅನೈರ್ಮಲ್ಯ ಕಟ್ಟಡಗಳ ಕುರಿತು ತನಿಖೆಗೆ ಸರ್ಕಾರ ಆದೇಶಿಸಿದ್ದು, ತನಿಖೆಯ ನಂತರ ಅಂತಹ ಕಟ್ಟಡಗಳನ್ನು ತೆರವು ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.