Tuesday, February 27, 2024

ಇಂದು ಹೈದರಾಬಾದ್‌ಗೆ ತೆರಳಲಿದ್ದಾರೆ ಡಿಕೆಶಿ, ಮುಂದಿನ ಪ್ಲ್ಯಾನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾನುವಾರ ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಂಜೆ ಹೈದರಾಬಾದ್‌ಗೆ ತೆರಳಲಿದ್ದಾರೆ.

ಅತಂತ್ರ ಫಲಿತಾಂಶ ಬಂದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಈ ಕಾರಣದಿಂದ ಖುದ್ದಿ ಡಿಕೆಶಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸಲಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳ ಅನ್ವಯ ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾರ್ಯತಂತ್ರ ರೂಪಿಸಲು ಅಧಿಕಾರಕ್ಕೆ ಬಾರದೇ ಹೋದರೆ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಡಿಕೆಶಿ ಹೈದರಾಬಾದ್‌ಗೆ ತೆರಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!