spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇಂದು ದೆಹಲಿಗೆ ತೆರಳಲಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್!

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕಾಂಗ್ರೆಸ್ ನ ವರಿಷ್ಠಿರನ್ನು ಭೇಟಿ ಮಾಡಲು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ರನ್ನು ಭೇಟಿ ಮಾಡಲಿದ್ದು, ಪಕ್ಷದಲ್ಲಿನ ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ.
ಕಳೆದ ಎರಡು ವಾರಗಳಲ್ಲಿ ರಾಜ್ಯ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು ತುಮಕೂರು, ಮಂಗಳೂರು, ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವರ್ಷದ ಅಂತ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಪಕ್ಷವನ್ನು ಬಲಪಡಿಸುವ ದೃಷ್ಟಿಯಿಂದ ಹೊಸ ನಾಯಕರನ್ನು ನೇಮಿಸಲಾಗುತ್ತದೆ.
ಇದಕ್ಕೂ ಮುನ್ನ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ರಾಜಸ್ಥಾನಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಕ್ಷದಲ್ಲಿ ಬಾರಿ ಕುತೂಹಲ ಮೂಡಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss