ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಜನ್ಮದಿನಕ್ಕೆ ಯಾರೂ ಬ್ಯಾನರ್ ಹಾಕಬೇಡಿ, ಕೇಕ್ ಹಿಡಿದುಕೊಂಡು ಮನೆಯ ಬಳಿ ಬರಬೇಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ನಾಳೆ ಡಿಕೆಶಿ ಜನ್ಮದಿನವಾಗಿದ್ದು, ಟ್ವಿಟರ್‌ನಲ್ಲಿ ಬರ್ಥ್‌ಡೇ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮದಿನವನ್ನು ಆಚರಣೆ ಮಾಡುವುದು ಬೇಡ ಎಂದು ವಿನಂತಿ ಮಾಡುತ್ತೇನೆ. ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಅದುವೇ ನನಗೆ ಶ್ರೀರಕ್ಷೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.