ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ವಿಧಾನ ಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪ ಕುರಿತಂತೆ ಬಿಜೆಪಿ ನಾಯಕರು ದಾಖಲೆಗಳನ್ನು ಒದಗಿಸಲಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸಂಸದ ರಾಘವೇಂದ್ರ ಹಿಟ್ ಆಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ ಎಂದು ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ದೀಪಾವಳಿಯಂದು ರಾಜ್ಯದ ಜನತೆ ಹಸಿರು ಪಟಾಕಿಯನ್ನು ಮಾತ್ರ ಬಳಸಬೇಕು ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಹಣ ಸಂಗ್ರಹ: ಆರೋಪಕ್ಕೆ ದಾಖಲೆ ಒದಗಿಸಿ ಎಂದ ಡಿಕೆಶಿ
