ಕುಂಭಮೇಳಕ್ಕೆ ಹೋಗಿ ಬಂದ್ಮೇಲೆ ಡಿಕೆಶಿಗೆ ಬುದ್ಧಿ ಬಂದಿದೆ, ಸಿಎಂಗೆ ಬರಬೇಕಷ್ಟೇ: ಈಶ್ವರಪ್ಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿಂದುತ್ವದ ಪರ ನಿಲುವು ಪ್ರಕಟಿಸಿರೋದು ಇತರರಿಗೆ ಮಾದರಿ. ಆದರೆ ಹಿಂದುತ್ವದ ನಿಲುವು ನಾಟಕವೋ, ನಿಜವೋ ಎಂದು ದೇವರು ತೀರ್ಮಾನ ಮಾಡುತ್ತಾನೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕುಂಭಮೇಳದಲ್ಲೂ ಪಾಲ್ಗೊಂಡಿದ್ದರು. ಅವರಿಗೆ ಹಿಂದುತ್ವದ ಜಾಗೃತಿ ಉಂಟಾಗಿದೆ ಜೊತೆಗೆ ಬುದ್ಧಿಯೂ ಬಂದಿದೆ. ಈಗ ಸಿಎಂ ಸಿದ್ದರಾಮಯ್ಯ ಅವರಿಗೂ ಬುದ್ದಿ ಬರಲಿ ಎಂದರು.

ಸ್ವಾಂತಂತ್ರ್ಯ ಪೂರ್ವದ ಕಾಂಗ್ರೆಸ್ಸಿಗರು ಹೋರಾಟ ಮಾಡಿದ್ದೇ ಹಿಂದುತ್ವವನ್ನು ಮತ್ತೆ ವೈಭವೀಕರಿಸುವ ಉದ್ದೇಶದಿಂದ. ಹಿಂದುತ್ವ ಕೇವಲ ಬಿಜೆಪಿ ಸ್ವತ್ತಲ್ಲ. ಸರ್ವ ಜನರ ಸುಖ ಬಯಸುವುದೇ ಹಿಂದುತ್ವ. ಹಳೆ ಕಾಂಗ್ರೆಸ್ಸಿಗರ ರಕ್ತದಲ್ಲಿ ಹಿಂದುತ್ವ ಈಗಲೂ ಇದೆ. ಎಲ್ಲರೂ ಧರ್ಮದ್ರೋಹಿಗಳಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!