ಅನಧಿಕೃತ ಫ್ಲೆಕ್ಸ್‌ ಅಳವಡಿಕೆಗೆ ಡಿಕೆಶಿ ಗರಂ : ಕೈ ಕಾರ್ಯಕರ್ತರ ವಿರುದ್ಧವೇ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರು ಕ್ರಮಕೈಗೊಂಡಿದ್ದಾರೆ.

ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ ಹಾಗೂ ಯಲಹಂಕ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಪರಿಶೀಲಿಸಿ ತೆರವು ಕಾರ್ಯಾಚರಣೆ ನಡೆಸಿದರು.

ಫ್ಲೆಕ್ಸ್ ತೆರವುಗೊಳಿಸಲು ಖರ್ಚಾಗುವ ಹಣವನ್ನು ಫ್ಲೆಕ್ಸ್‌ಗಳನ್ನು ಅಳವಡಿಸಿರುವವರಿಂದಲೇ ವಸೂಲಿಗೆ ಕ್ರಮವಹಿಸಲಾಗಿದೆ. ಫ್ಲೆಕ್ಸ್‌ ಅಳವಡಿಸಿದವರ ವಿರುದ್ಧ ಇದುವರೆಗೂ 12 ಎಫ್‌ಐಆರ್ ದಾಖಲಿಸಲಾಗಿದ್ದು, 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ನಗರದ ಪೂರ್ವ, ಪಶ್ಚಿಮ ಹಾಗೂ ಯಲಹಂಕ ಸೇರಿದಂತೆ ಮೂರೂ ವಲಯಗಳ ಅನಧಿಕೃತ ಫ್ಲೆಕ್ಸ್ ತೆರವು ಮಾಡಲಾಗಿದೆ. ನಿನ್ನೆಯಿಂದ 1,350 ಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್‌ಗಳು ಹಾಗೂ 600 ಕ್ಕೂ ಹೆಚ್ಚು ಪಕ್ಷದ ಧ್ವಜಗಳನ್ನು ತೆಗೆಯಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!