ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕುಡಿಯುವ ನೀರನ್ನು ಪರೀಕ್ಷೆಗೆ ಒಳಪಡಿಸುವಂತೆ ಡಿಕೆಶಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಆಡಳಿತ ಮಂಡಳಿ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ. ಮುಖ್ಯಮಂತ್ರಿ ಅವರು ನಿನ್ನೆ ಈ ನಗರಕ್ಕೆ ಭೇಟಿ ನೀಡಿ ವಿವಿಧ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ತಕ್ಷಣವೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು ಎಲ್ಲೆಡೆ ಯಾವ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಕಲುಷಿತ ಕುಡಿಯುವ ನೀರಿನಿಂದಾಗಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ಕಾಲರಾ ಹರಡಿರುವುದು ದೃಢಪಟ್ಟಿದೆ. ಆದ್ದರಿಂದ ಬೆಂಗಳೂರಿನ ಎಲ್ಲಾ ಕಡೆ ಕುಡಿಯುವ ನೀರಿನ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!