April 12, 2026
Sunday, April 12, 2026
spot_img

ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಮಾಸ್ಟರ್ ಸ್ಟ್ರೋಕ್: ಅಲ್ಪಸಂಖ್ಯಾತ ಘಟಕಕ್ಕೆ ‘ಮೇಜರ್ ಸರ್ಜರಿ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಭಿನ್ನಮತದ ಸ್ಫೋಟಗೊಂಡಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ.

ಈ ಬೆನ್ನಲ್ಲೇ ಮಹಮ್ಮದ್ ಸಿರಾಜ್, ಅಬ್ದುಲ್ ಗನಿ ತಾಹೀರ್ ಸೇರಿದಂತೆ ಹಲವು ಪದಾಧಿಕಾರಿಗಳು ಸಾಲು ಸಾಲಾಗಿ ರಾಜೀನಾಮೆ ನೀಡತೊಡಗಿದ್ದರಿಂದ, ಎಚ್ಚೆತ್ತ ಹೈಕಮಾಂಡ್ ಇಡೀ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿ ಆದೇಶಿಸಿದೆ.

ಚುನಾವಣಾ ಪ್ರಚಾರದಲ್ಲಿ ಸಕ್ರಿಯರಾಗದ ನಾಯಕರ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿರುವ ಹೈಕಮಾಂಡ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಸ್ಥಾನಗಳಿಗೂ ಕುತ್ತು ತರುವ ಮುನ್ಸೂಚನೆ ನೀಡಿದೆ. ಈ ‘ಮೇಜರ್ ಸರ್ಜರಿ’ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !