March 26, 2026
Thursday, March 26, 2026
spot_img

ಬಜೆಟ್‌ ಮೇಲೆ ಕೆಲಸ ನಿರ್ಧರಿತವಾಗಿಲ್ಲ, ನಮ್ಮ ಕಾರ್ಯ ಮಾಡೇ ಮಾಡ್ತೇವೆ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಡೋ ಎಲ್ಲ ಕೆಲಸಗಳಿಗೆ ಬಜೆಟ್‌ ಮೇಲೆ ಅವಲಂಬನೆ ಆಗೋಕೆ ಆಗತ್ತಾ? ನಮ್ಮ ಜಿಲ್ಲೆಯ ಕೆಲಸಗಳು ಬಜೆಟ್ ಮೇಲೆ ನಿಂತಿಲ್ಲ. ಬೇರೆಯವರಿಗೆ ಬಜೆಟ್ ಬೇಕಾಗಿರಬಹುದು, ನಮಗೆ ಬೇಡ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಹೇಳಿದ್ದಾರೆ.

ಬಜೆಟ್ ನಿಂದ ಯಾವುದೇ ನಿರೀಕ್ಷೆಗಳನ್ನು ಇಟ್ಟುಕೊಳ್ಳುವ ಅಗತ್ಯವಿಲ್ಲ. ಬಜೆಟ್ ಇದ್ದರೂ ಅಥವಾ ಇಲ್ಲದಿದ್ದರೂ, ನಾವು ನಮ್ಮ ಕೆಲಸವನ್ನು ಮಾಡುತ್ತಿದ್ದೇವೆಂದು ಹೇಳಿದರು.

ಇಡೀ ದೇಶದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮಾತ್ರ ಒಂದು ಶಾಲೆಗೆ 15 ಕೋಟಿ ರೂ. ವೆಚ್ಚದಂತೆ 25 ಕೆಪಿಎಸ್ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ನಾವು ಬಜೆಟ್‌ನಲ್ಲಿ ಬರೆಸಿದ್ದೇವಾ? ಈ ಯೋಜನೆ ಸೃಷ್ಟಿಕರ್ತರು ನಾವೇ. ಇಡೀ ರಾಜ್ಯದಲ್ಲಿ ಈ ಯೋಜನೆ ವಿಸ್ತರಿಸಲು ಹೊಸ ನೀತಿ ರೂಪಿಸಿದ್ದೇವೆ.

ರಾಜ್ಯದೆಲ್ಲೆಡೆ 2 ಸಾವಿರ ಶಾಲೆಗಳ ನಿರ್ಮಾಣ ಮಾಡುವ ಗುರಿ ಇದೆ. ಬೇರೆಯವರಿಗೆ ಬಜೆಟ್ ಬೇಕಾಗುತ್ತದೆ. ನಮಗೆ ಬಜೆಟ್‌ನಲ್ಲಿ ಸೇರಿಸಿ ಕೆಲಸ ಮಾಡಬೇಕು ಎಂದೇನಿಲ್ಲ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !