ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಕೆ ಶಿವಕುಮಾರ್ ಪರ್ಸಂಟೇಜ್‌ಗಾಗಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕನ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಯತ್ನಾಳ್ ಮಾತನಾಡಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ನೀರಾವರಿ ಮಂತ್ರಿ ಆಗುವ ಉದ್ದೇಶ ಏನಿತ್ತು? ಪರ್ಸಂಟೇಜ್‌ಗಾಗಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಕೋವಿಡ್ ಬಗ್ಗೆ ಭ್ರಷ್ಟಾಚಾರ ನಡೆದಿದೆ ಎಂದು ಈಗ ಡಿಕೆಶಿ ಮಾತನಾಡುತ್ತಿದ್ದಾರೆ. ಅದೇ ಡಿಕೆ ಶಿವಕುಮಾರ್ ಹಳೆ ಬಿಲ್ಲು ನೀಡಲು 10% ಹಣ ಹೊಡೆಯುತ್ತಿದ್ದಾರೆ. ಮೇಕೆದಾಟು ಹೋರಾಟ ಎಂದೆಲ್ಲಾ ಮಾತನಾಡುತ್ತಿದ್ದ ಡಿಕೆಶಿ ಈ ದಂಡೆಯಿಂದ ಆ ದಂಡೆಗೆ ಹೋಗುವ ಗಿರಾಕಿ ಎಂದು ವಾಗ್ದಾಳಿ ನಡೆಸಿದ್ದಾರೆ.