June 2, 2026
Tuesday, June 2, 2026
spot_img

ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಸಂಭ್ರಮ ಮನೆ ಮಾಡಿದ್ದು, ನಾಳೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆ ನೆಲಮಂಗಲದಲ್ಲಿ ಈ ಐತಿಹಾಸಿಕ ಕ್ಷಣವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಡಿಕೆಶಿ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಇದಕ್ಕಾಗಿ ಬರೋಬ್ಬರಿ 10 ಲಕ್ಷ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ.

ನೆಲಮಂಗಲದ ಗ್ಲೋಬಲ್ ಕಾಲೇಜು ಮೈದಾನದಲ್ಲಿ ಬೃಹತ್ ಲಾಡು ತಯಾರಿಕಾ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳೀಯ ಶಾಸಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ.

ನೆಲಮಂಗಲದ ಪ್ರತಿ ಮನೆಗೆ ವಿತರಣೆ

ನೆಲಮಂಗಲ ತಾಲೂಕಿನಾದ್ಯಂತ ಇರುವ ಸುಮಾರು 85 ಸಾವಿರದಿಂದ 90 ಸಾವಿರ ಮನೆಗಳಿಗೆ ಲಾಡುಗಳ ಸಿಹಿ ಬಾಕ್ಸ್ ಅನ್ನು ಉಚಿತವಾಗಿ ವಿತರಿಸಲು ಶಾಸಕರು ನಿರ್ಧರಿಸಿದ್ದಾರೆ. ನಾಳೆ ಬೆಳಗ್ಗೆಯಿಂದಲೇ ಸಿಹಿ ಹಂಚಿಕೆ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ಸಿಗಲಿದೆ.

300 ಬಾಣಸಿಗರಿಂದ ಸಿದ್ಧತೆ

ಇದಕ್ಕಾಗಿ ನೆಲಮಂಗಲದಲ್ಲಿ ಬೃಹತ್ ಅಡುಗೆ ಶಾಲೆ ನಿರ್ಮಾಣವಾಗಿದ್ದು, ಸುಮಾರು 250 ರಿಂದ 300 ನುರಿತ ಬಾಣಸಿಗರು ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಲಾಡುಗಳ ತಯಾರಿಕೆ ಮತ್ತು ಶುಚಿತ್ವ ಕ್ರಮಗಳನ್ನು ಶಾಸಕ ಶ್ರೀನಿವಾಸ್ ಪರಿಶೀಲನೆ ನಡೆಸಿದ್ದು, ಯಾವುದೇ ಕೊರತೆಯಾಗದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !