ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿನ್ನೆಯಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದರು. ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತ ಮಾಡಿದ್ದಾರೆ.
ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದಂತೆಯೇ ಕಾರ್ ಬಳಿ ಆಗಮಿಸಿ ಹೂಗುಚ್ಛ ನೀಡಿ, ಶಾಲು ಹೊದಿಸಿ ಆದರದ ಸ್ವಾಗತ ನೀಡಿದ್ದಾರೆ. ನಂತರ ಡಿಕೆಶಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.