ಒಂಬತ್ತು ವರ್ಷದ ಬಾಲಕಿಯನ್ನು ಅಪಹರಿಸಿ ಆಸ್ತಿ ಬರೆಸಿಕೊಂಡಿದ್ದ ಡಿಕೆಶಿ: ಹೆಚ್‌ಡಿಡಿ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಒಂಬತ್ತು ವರ್ಷದ ಬಾಲಕಿಯನ್ನು ಕಿಡ್ನಾಪ್‌ ಮಾಡಿಕೊಂಡು ಬಂದು ಆಸ್ತಿ ಡಿಕೆ ಶಿವಕುಮಾರ್‌ ಆಸ್ತಿ ಬರೆಸಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಗಂಭೀರ ಆರೋಪ ಮಾಡಿದ್ದಾರೆ.

ಒಕ್ಕಲಿಗ ಸಮುದಾಯ ಹೆಚ್ಚಿರುವ ಕಡೆ ನನ್ನ ಕೈ ಬಲಪಡಿಸಿ ಎಂದು ಹೇಳುತ್ತಿರುವ ಡಿ.ಕೆ ಶಿವಕುಮಾರ್ ಹೇಳ್ತಿದ್ದಾರೆ. ಆದರೆ
ಅವರ ಕೈಯನ್ನ ಏಕೆ ಬಲಪಡಿಸಬೇಕು? 9 ವರ್ಷದ ಹುಡುಗಿಯನ್ನು ಎತ್ತುಕೊಂಡು ಹೋಗಿ ಆಸ್ತಿ ಬರೆಸಿಕೊಂಡರಲ್ಲಾ ಅದಕ್ಕಾ ಎಂದು ಪ್ರಶ್ನಿಸಿದ್ದಾರೆ.

ಬಿಡದಿ ಬಳಿ ಅಮೆರಿಕದಿಂದ ಹಣ ಸಂಪಾದನೆ ಮಾಡಿಕೊಂಡು ಬಂದ ಮನುಷ್ಯನ ಆಸ್ತಿ ಬರೆಸಿಕೊಂಡಿದ್ದರು. ನನ್ನ ಬಳಿ ಎಲ್ಲಾ ದಾಖಲೆಗಳಿವೆ.

ಬಿಡದಿ ಬಳಿ ರಸ್ತೆ ಪಕ್ಕದಲ್ಲಿ ಅವರು ಒಂದು ಐಟಿ ಕಂಪನಿಯನ್ನ ಸ್ಥಾಪನೆ ಮಾಡಿದರು. ಅದರ ಹಿಂದಿನ ದಿನ ಇವರು ಒಂದು ಸುಳ್ಳು ಕ್ರಯ ಪತ್ರ ಮಾಡುತ್ತಾರೆ. ಆಮೇಲೆ ಅವರ 9 ವರ್ಷದ ಮಗಳನ್ನ ತೆಗೆದುಕೊಂಡು ಹೋಗಿ ಪಕ್ಕದ ಮನೆಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಇಡುತ್ತಾರೆ. ನಿನ್ನ ಮಗಳು ಬೇಕು ಅಂದ್ರೆ ಸಹಿ ಮಾಡು ಎಂದು ಧಮ್ಕಿ ಹಾಕುತ್ತಾರೆ. ಆ ತಾಯಿ ಎಲ್ಲಾ ಬರೆದುಕೊಡು, ನನ್ನ ಮಗಳ ಕರೆದುಕೊಂಡು ಬಾರಪ್ಪಾ ಅಂತ ಆಕೆ ಗಂಡನ ಕಾಲು ಹಿಡಿಯುತ್ತಾಳೆ. ನನ್ನ ಬಳಿ ದಾಖಲೆ ಇದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!