ಗೆಲುವಿನ ರಣತಂತ್ರ ರೂಪಿಸಲು ಹೊರಟ ಡಿಕೆಶಿ: ಸಚಿವ ಮುನಿರತ್ನ ವಿರುದ್ಧ ಮಹಿಳಾ ಅಭ್ಯರ್ಥಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳಿಂದ ಭರದ ಸಿದ್ದತೆಗಳು ನಡೆಯುತ್ತಿದ್ದು, ಮತಬೇಟೆಗೆ ರಣತಂತ್ರ ರೂಪಿಸುತ್ತಿದೆ.

ಇದೀಗ ಬಿಜೆಪಿ ಸಚಿವ ಮುನಿರತ್ನರನ್ನು ಸೋಲಿಸಲು ಪಣತೊಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪರನ್ನು ಮಹಿಳಾ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ.

ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್, ರಾಜಕಾರಣದಲ್ಲಿ ಸಾಧ್ಯತೆ ಬಿಟ್ಟರೆ ಬೇರೇನೂ ಇಲ್ಲ, ಹೆಣ್ಣು ಮಕ್ಲಳು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು, ನಾನು 2004 ರಲ್ಲಿ ತೇಜಸ್ವಿನಿ ರಮೇಶ್ ಅವರನ್ನು ದೇವೇಗೌಡರ ವಿರುದ್ಧ ನಿಲ್ಲಿಸಿದ್ದೆ, ತೇಜಸ್ವಿನಿ 1 ಲಕ್ಷದ 30 ಸಾವಿರ ಮತಗಳಿಂದ ಜಯ ಗಳಿಸಿದರು , ಹೆಣ್ಣು ಮಕ್ಲಳು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು ಎಂದರು.

ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಆರ್‌ಆರ್ ನಗರದಲ್ಲಿ ಕುಸುಮಾ ಹನುಮಂತರಾಯಪ್ಪ ಅವರು ಆಯೋಜಿಸಿದ್ದ ಮಹಿಳಾ ಸಂಕಲ್ಪ ಸಮಾವೇಶ, ಇಂದಿರಾ ನಮನ ಕಾರ್ಯಕ್ರಮದಲ್ಲಿ ಮಾತನಾಡಿದೆ. ಹೆಣ್ಣು ಸಂಸಾರದ ಕಣ್ಣು, ಹೆಣ್ಣು ಮತ್ತು ಯುವಸಮೂಹ ಇವರಿಬ್ಬರು ಮಾತ್ರ ದೇಶದಲ್ಲಿ ಬದಲಾವಣೆ ತರಲು ಸಾಧ್ಯ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!