ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು ನಿಡಿದೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಹಿಂದೆ ತಮಿಳುನಾಡಿನ ಜನರಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದು, ಇದನ್ನು ಡಿಎಂಕೆ ವಿರೋಧಿಸಿದೆ.

ಕರ್ನಾಟಕ ಹಾಗೂ ತಮಿಳುನಾಡು ಜನರ ಮಧ್ಯೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ. ಈವರೆಗೂ ಎನ್‌ಐಎ ಯಾರನ್ನೂ ಬಂಧಿಸಿಲ್ಲ. ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ದೂರು ದಾಖಲಿಸಿ ಎಂದು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು, ಬಾಂಬ್ ಇಡಲು ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಎನ್‌ಐಎ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆ. ಆದರೆ ಎನ್‌ಐಎ ಇಲ್ಲಿಯವರೆಗೆ ಯಾರನ್ನೂ ಬಂಧಿಸಿದಲ್ಲ ಎಂದು ಡಿಎಂಕೆ ದೂರಿನಲ್ಲಿ ಉಲ್ಲೇಖಿಸಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!