ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಆಡಳಿತಾರೂಢ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಉಪ ಪ್ರಧಾನ ಕಾರ್ಯದರ್ಶಿ ಸುಬ್ಬಲಕ್ಷ್ಮಿ ಜಗದೀಶನ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಡಿಎಂಕೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಸಕ್ರಿಯ ರಾಜಕಾರಣವನ್ನು ತ್ಯಜಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಪಕ್ಷದ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಯುಪಿಎ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು. 14ನೇ ಲೋಕಸಭೆಯಲ್ಲಿ ತಿರುಚೆಂಗೋಡನ್ನು ಪ್ರತಿನಿಧಿಸಿದರು. ನಂತರ 1977-1980 ರಲ್ಲಿ ತಮಿಳುನಾಡು ಸರ್ಕಾರದಲ್ಲಿ ಜವಳಿ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ಸುಬ್ಬಲಕ್ಷ್ಮಿ ಜಗದೀಶನ್ ಅವರು 1989-1991 ರ ನಡುವೆ ಸಮಾಜ ಕಲ್ಯಾಣ ಸಚಿವರಾಗಿಯೂ ಸೇವೆ ಸಲ್ಲಿಸಿದರು. 75 ವರ್ಷ ವಯಸ್ಸಿನ ಸುಬ್ಬಲಕ್ಷ್ಮಿ ಜಗದೀಶನ್ ಸಕ್ರಿಯ ರಾಜಕೀಯದಲ್ಲಿ ತಮ್ಮ ನಾಲ್ಕು ದಶಕಗಳ ಅವಧಿಯನ್ನು ಕೊನೆಗೊಳಿಸುತ್ತಿರುವುದಾಗಿ ತಿಳಿಸಿದರು.
ಈ ಬಗ್ಗೆ ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಗೆ ಆಗಸ್ಟ್ 29 ರಂದು ತಿಳಿಸಿರುವುದಾಗಿ ಹೇಳಿದರು. ನಾನು ಆಗಸ್ಟ್ 29 ರಂದು ಪಕ್ಷದ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ನಾನು ಡಿಎಂಕೆ ಮತ್ತು ಸಕ್ರಿಯ ರಾಜಕೀಯದಿಂದ ಹೊರಬರುತ್ತಿರುವುದಾಗಿ ಘೋಷಿಸಿದರು.