September 28, 2026
Monday, September 28, 2026
spot_img

ಸಿಎಂ ವಿಜಯ್ ವಿರುದ್ಧ ವಿವಾದಾತ್ಮಕ ಹೇಳಿಕೆ: ಡಿಎಂಕೆ ಶಾಸಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಮುಖ್ಯಮಂತ್ರಿ ಸಿ. ವಿಜಯ್ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಡಿಎಂಕೆ ಶಾಸಕ ಜಿ.ಆರ್. ಮಾರ್ಕೆಂಡಿಯನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಅವರನ್ನು ವಿಚಾರಣೆಗಾಗಿ ಟುಟಿಕೋರಿನ್ ಜಿಲ್ಲಾ ಪೊಲೀಸ್ ಕಚೇರಿಗೆ ಕರೆದೊಯ್ಯಲಾಗಿದೆ.

ದೂರು ಬಳಿಕ ಕ್ರಮ

ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಸಿಎಂ ವಿಜಯ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರೆಂದು ಆರೋಪಿಸಲಾಗಿದೆ. ಈ ಸಂಬಂಧ ಟಿವಿಕೆ ಪಕ್ಷದ ಕಾರ್ಯಕರ್ತರು ದೂರು ಸಲ್ಲಿಸಿದ್ದ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿ ಬಂಧನ ಕ್ರಮ ಕೈಗೊಂಡಿದ್ದಾರೆ.

ಬಂಧನಕ್ಕೆ ಬೆಂಬಲಿಗರ ಪ್ರತಿಭಟನೆ

ಶಾಸಕರ ಬಂಧನದ ನಂತರ ಡಿಎಂಕೆ ಕಾರ್ಯಕರ್ತರು ಪೊಲೀಸ್ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಘಟನೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಗಮನ ಸೆಳೆಯಲಾಗಿದೆ.

Must Read