ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರವು ವಕ್ಫ್ ಕಾಯ್ದೆಗೆ ತಂದ ತಿದ್ದುಪಡಿಯನ್ನು ಪ್ರಶ್ನಿಸಿ ಡಿಎಂಕೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಡಿಎಂಕೆಯ ಲೋಕಸಭಾ ಸಚೇತಕ ಮತ್ತು ಉಪ ಪ್ರಧಾನ ಕಾರ್ಯದರ್ಶಿ ಎ. ರಾಜಾ ಇಂದು ಸುಪ್ರೀಂ ಕೋರ್ಟ್‌ನಲ್ಲಿ ಪಕ್ಷದ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ.
ವಕ್ಫ್ (ತಿದ್ದುಪಡಿ) ಮಸೂದೆ ಲೋಕಸಭೆ, ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಆದ್ರೆ ಡಿಎಂಕೆ (DMK) ಮತ್ತು ಇತರ ಹಲವಾರು ರಾಜಕೀಯ ಪಕ್ಷಗಳಿಂದ ತೀವ್ರ ವಿರೋಧ ಪಡಿಸಿದೆ.
ವಕ್ಫ್ ತಿದ್ದುಪಡಿಯು ಸುಧಾರಣೆಯ ನೆಪದಲ್ಲಿ ಆಸ್ತಿ ಹಕ್ಕುಗಳನ್ನು ಬದಲಾಯಿಸುವ ಪ್ರಯತ್ನವಾಗಿದೆ ಎಂದು ಡಿಎಂಕೆ ಸಂಸದ ರಾಜಾ ವಾದಿಸಿದ್ದರು. ಇದು ಅಲ್ಪಸಂಖ್ಯಾತ ಸಂಸ್ಥೆಗಳಿಗೆ ಅಸ್ತಿತ್ವದಲ್ಲಿರುವ ಕಾನೂನು ರಕ್ಷಣೆಗಳನ್ನು ಕೆಡವುತ್ತದೆ ಎಂದು ಹೇಳಿದ್ದರು.
ಇನ್ನು, ಡಿಎಂಕೆ ನಾಯಕ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ವಕ್ಫ್ ತಿದ್ದುಪಡಿ ಮಸೂದೆಗೆ ಬಲವಾದ ವಿರೋಧ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಮಧ್ಯರಾತ್ರಿ ಈ ಮಸೂದೆ ಅಂಗೀಕಾರವನ್ನು ಖಂಡಿಸಿದ್ದಾರೆ.