October 9, 2026
Friday, October 9, 2026
spot_img

ಗಣೇಶೋತ್ಸವದ ಹೆಸರಲ್ಲಿ ವಿವಾದ ಸೃಷ್ಟಿಸಬೇಡಿ: ಬಿಜೆಪಿಗೆ ಸಿಎಂ ಡಿ.ಕೆ. ಶಿವಕುಮಾರ್ ಟಾಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣೇಶ ಹಬ್ಬದ ವೇಳೆ ಅನಗತ್ಯವಾಗಿ ಯಾವುದೇ ನಿರ್ಬಂಧವನ್ನು ಸರ್ಕಾರ ಹಾಕಿಲ್ಲ, ಆದ್ರೆ ಮೆರವಣಿಗೆ ವೇಳೆ ಶಿಸ್ತು ಹಾಗೂ ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದಷ್ಟೇ ಹೇಳಿದ್ದೇವೆ, ಆದರೆ ಬಿಜೆಪಿ ಹಬ್ಬದ ಹೆಸರಲ್ಲಿ ಕೋಮು ಭಾವನೆ ಕೆರಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಇಲ್ಲದ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನ ಬೇಡ

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಗಣೇಶೋತ್ಸವಕ್ಕೆ ಸರ್ಕಾರ ಹಲವು ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆಶಿ, ಇಲ್ಲದ ವಿವಾದಗಳನ್ನು ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ಇದನ್ನೂ ಓದಿ:

ಗಣೇಶ ಯಾರೊಬ್ಬರ ಸ್ವತ್ತಲ್ಲ

ಗಣೇಶ ಯಾರೊಬ್ಬರ ಸ್ವತ್ತಲ್ಲ. ಬಾಲ ಗಂಗಾಧರ ತಿಲಕ್ ಅವರು ಆರಂಭಿಸಿದ ಪರಂಪರೆ ಮುಂದುವರಿದಿದೆ. ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕು ಎಂದರು.

ಗಣೇಶ ಮೆರವಣಿಗೆಗಳ ಸಂದರ್ಭದಲ್ಲಿ ವಿದ್ಯುತ್ ಕಂಬಗಳು, ತಂತಿಗಳು ಸೇರಿದಂತೆ ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.

Must Read