ರಾಜ್ಯದ ನೆಮ್ಮದಿಗೆ ಭಂಗ ತರಬೇಡಿ, ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ: ಕಮಿಷನರ್​ ದಯಾನಂದ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸದ್ಯ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಸೃಷ್ಟಿಯಾಗಿದೆ. ಹಾಗಾಗಿ ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಇತ್ತ ಕರ್ನಾಟದಲ್ಲೂ ಪೊಲೀಸ್​ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಿಬ್ಬಂದಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹಲವು ಸೂಚನೆ ನೀಡಿದ್ದಾರೆ.

ಭಾರತದ ಗಡಿ ಭಾಗಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಅವಶ್ಯ ಸಾಮಾಗ್ರಿ ಶೇಖರಿಸಲಾಗುತ್ತಿದೆ ಎನ್ನುವ ಮಾಹಿತಿ ಕೇಳಿ ಬರುತ್ತಿದೆ. ಹಾಗಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲಾ ಕಡೆ ಸಾಮಾನ್ಯವಾದ ಭದ್ರತೆ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡಿ ರಾಜ್ಯದ ನೆಮ್ಮದಿಗೆ ಭಂಗ ತಂದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!