Thursday, March 23, 2023

Latest Posts

ಮಧ್ಯಪ್ರವೇಶಿಸಲು ಯಾವುದೇ ಕಾರಣ ಹುಡುಕಬೇಡಿ : ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತೀಯ ಸೇನೆಗೆ ಅಗ್ನಿವೀರರನ್ನು ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

“ದೇಶದ ಹಿತದೃಷ್ಟಿ ಮತ್ತು ಸಶಸ್ತ್ರ ಪಡೆಯನ್ನು ಬಲಪಡಿಸುವ ಉದ್ದೇಶದಿಂದ ಯೋಜನೆ ಜಾರಿಗೆ ತರಲಾಗಿದೆ” ಎಂದು ದೆಹಲಿಯ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ತೀರ್ಪು ನೀಡುವ ಸಂದರ್ಭದಲ್ಲಿ ಹೇಳಿದೆ.

ಯೋಜನೆಗೆ ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ಸುಬ್ರಮಣಿಯನ್ ಪ್ರಸಾದ್ ಅವರನ್ನೊಳಗೊಂಡ ಪೀಠವು ಸೋಮವಾರ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಎತ್ತಿಹಿಡಿದಿದೆ ಮತ್ತು ಈ ಯೋಜನೆಯಲ್ಲಿ ಮಧ್ಯಪ್ರವೇಶಿಸುವ ಅಗತ್ಯ ಇಲ್ಲ ಎಂದು ಹೇಳಿದೆ.

ಡಿಸೆಂಬರ್ 15, 2022 ರಂದು ವಿವಿಧ ಅರ್ಜಿದಾರರು ಮತ್ತು ಕೇಂದ್ರ ಸರ್ಕಾರದ ಪರವಾಗಿ ವಾದಗಳನ್ನು ಆಲಿಸಿದ ನಂತರ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!