Saturday, August 13, 2022

Latest Posts

ಕೊರೋನಾ ನಿರ್ಲಕ್ಷಿಸಬೇಡಿ, ಮಾರ್ಗಸೂಚಿ ಪಾಲಿಸಿ: ರಾಹುಲ್ ಗಾಂಧಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಯಾವುದೇ ಕಾರಣಕ್ಕೂ ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಬೇಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮೊದಲೇ ಎಚ್ಚರಿಸಿದಂತೆ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೊಂದು ಆತಂಕಕಾರಿ ವಿಚಾರವಾಗಿದೆ. ದಯವಿಟ್ಟು ಮಾಸ್ಕ್ ಧರಿಸಿ ಮತ್ತು ಎಲ್ಲಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ನಾಲ್ಕು ವಾರಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಗುಣವಾಗಿತ್ತಿರುವ ಗ್ರಾಫ್ ವೊಂದನ್ನು ಟ್ವೀಟ್ ನಲ್ಲಿ ಶೇರ್ ಮಾಡಿದ್ದಾರೆ. ಅದರಲ್ಲಿ ಕೊರೋನಾ ಸೋಂಕು ಪ್ರಕರಣಗಳು ವಾರದಲ್ಲಿ ಶೇ.33 ರಷ್ಟು ಏರಿಕೆಯಾಗಿದನ್ನು ತಿಳಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss