ನಟ ದರ್ಶನ್ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿರುವ ವಿವರ ಪ್ರಕಟಿಸಬೇಡಿ: ಹೈಕೋರ್ಟ್ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲ 17 ಆರೋಪಿಗಳ ವಿರುದ್ಧ 3,991 ಪುಟಗಳ ವಿವರವಾದ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಂದಿವೆ.

ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ.

ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಸುದ್ದಿ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಕಳೆದ ತಿಂಗಳು ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!