ತಮಿಳುನಾಡಿಗೆ ನೀರು ಬಿಡದಿರಿ: ರಾಜ್ಯ ಸರ್ಕಾರಕ್ಕೆ ನಳಿನ್‍ ಕುಮಾರ್ ಕಟೀಲ್ ಒತ್ತಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು: ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ನಮ್ಮ ರೈತರಿಗೆ ನೀರು ಕೊಡಲಾಗುತ್ತಿಲ್ಲ. ಕುಡಿಯುವ ನೀರಿನ ಹಾಹಾಕಾರವೂ ಇದೆ. ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಬಿಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ (ಸಿಡಬ್ಲ್ಯುಆರ್‍ಸಿ) ಆದೇಶದ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದರು.
ಈ ವಿಷಯದಲ್ಲಿ ಸುಪ್ರೀಂ ಕೋರ್ಟಿನಲ್ಲಿ ದಾವೆ ಹೂಡಬೇಕು.ಅಲ್ಲದೇ ಹೋರಾಟ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಸರಕಾರದ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜನರ ಹಿತ ಕಾಪಾಡುವುದು ಈ ಸರಕಾರದ ಜವಾಬ್ದಾರಿ. ಆದ್ದರಿಂದ, ಯಾವುದೇ ಕಾರಣಕ್ಕೆ ಕಾವೇರಿ ನದಿ ನೀರನ್ನು ಬಿಡದಿರಿ ಎಂದು ಅವರು ಒತ್ತಾಯಿಸಿದರು.

ಚುನಾವಣೆಗೆ ತಯಾರಿ
ಪಕ್ಷದ ರಾಜ್ಯ ಪದಾಧಿಕಾರಿಗಳ ಇಂದಿನ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಅವರು ಮಾರ್ಗದರ್ಶನ ಮಾಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಚರ್ಚೆ ನಡೆಸಿ ತಯಾರಿ ಮಾಡಿಕೊಂಡಿದ್ದೇವೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಯಲಿದೆ. ಜೊತೆಗೇ ನಾವು ಕಾವೇರಿ ನದಿ ನೀರಿನ ಸಂಬಂಧ ಹೋರಾಟ ನಡೆಸುತ್ತೇವೆ. ಸರಕಾರವು ಎಸ್‍ಸಿ, ಎಸ್‍ಟಿಗಳಿಗೆ ಮೀಸಲಿಟ್ಟ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ಬೇರೆಡೆಗೆ ವರ್ಗಾಯಿಸಿದೆ. ಅದನ್ನು ಖಂಡಿಸಿ ಅದರ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತು ಇತರ ಮುಖಂಡರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!