ಇರಾನ್, ಇಸ್ರೇಲ್‌ಗೆ ಪ್ರಯಾಣಿಸಬೇಡಿ: ಭಾರತೀಯರಿಗೆ ಸಚಿವಾಲಯದಿಂದ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಂದಿನ 48 ಗಂಟೆಗಳಲ್ಲಿ ಇರಾನ್- ಇಸ್ರೇಲ್ ಮೇಲೆ ದಾಳಿ ನಡೆಸುವ ಸಾಧ್ಯತೆಯಿದ್ದು, ಈ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‌ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಪ್ರಸ್ತುತ ಇರಾನ್ ಅಥವಾ ಇಸ್ರೇಲ್‌ನಲ್ಲಿ ನೆಲೆಸಿರುವ ಭಾರತೀಯರು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಸಚಿವಾಲಯ ತಿಳಿಸಿದೆ.
ಸುರಕ್ಷತೆ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಓಡಾಟ ಕನಿಷ್ಠ ಮಟ್ಟಕ್ಕೆ ನಿರ್ಬಂಧಿಸಲು ವಿನಂತಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಇರಾನ್ ಇಸ್ರೇಲ್ ಮೇಲೆ ನೇರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್ ನಾಯಕತ್ವದಿಂದ ಮಾಹಿತಿ ಪಡೆದ ವ್ಯಕ್ತಿಯನ್ನು ಉಲ್ಲೇಖಿಸಿ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!