ಪ್ಲಾಸ್ಟಿಕ್‌ ಬಾಟಲಿಗಳಲ್ಲಿ ಸದಾ ನೀರು ಕುಡಿಯುತ್ತೀರಾ? ಮಿಸ್‌ ಮಾಡದೇ ಇದನ್ನು ಓದಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದುಡ್ಡುಕೊಟ್ಟು ಎಲ್ಲೆಂದರಲ್ಲಿ ಕಾಸು ವಾಟರ್ ಬಾಟಲ್ ಖರೀದಿಸಿ ನೀರು ಕುಡಿಯುವ ಅಭ್ಯಾಸವಿದೆಯೇ? ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಹೋಟೆಲ್, ಸಿನಿಮಾಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಸಿಗುವ ನೀರು ಕುಡಿಯುತ್ತೀರಾ? ಹಾಗಾದರೆ, ನಿಮ್ಮ ಆರೋಗ್ಯ ಅಪಾಯದಲ್ಲಿದೆ!

ಹೌದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಈ ಆತಂಕಕಾರಿ ಮಾಹಿತಿಯನ್ನು ತಿಳಿಸಿದೆ. ಪ್ರಾಧಿಕಾರವು ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.

ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣೀಕರಣವನ್ನು ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿದ ಬೆನ್ನಲ್ಲೇ ಎಫ್‌ಎಸ್‌ಎಸ್‌ಎಐ ಈ ಘೋಷಣೆ ಮಾಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!