ಬೇಕಾಗುವ ಸಾಮಗ್ರಿಗಳು:
ಹೆಸರು ಬೇಳೆ
ಹಸಿಮೆಣಸಿನಕಾಯಿ
ಶುಂಠಿ-ಬೆಳ್ಳುಳ್ಳಿ ಪೇಸ್ಟ್
ಈರುಳ್ಳಿ
ಕೊತ್ತಂಬರಿ ಸೊಪ್ಪು
ಅಕ್ಕಿ ಹಿಟ್ಟು
ಖಾರದ ಪುಡಿ, ಜೀರಿಗೆ, ಗರಂ ಮಸಾಲ
ಉಪ್ಪು
ಎಣ್ಣೆ
ಮಾಡುವ ವಿಧಾನ
ನೆನೆಸಿದ ಹೆಸರು ಬೇಳೆಯ ನೀರನ್ನು ಸಂಪೂರ್ಣವಾಗಿ ಸೋಸಿ. ನಂತರ ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಶುಂಠಿ ಸೇರಿಸಿ ನೀರು ಹಾಕದೆ ತರಿತರಿಯಾಗಿ ರುಬ್ಬಿಕೊಳ್ಳಿ. ರುಬ್ಬಿದ ಹಿಟ್ಟನ್ನು ಒಂದು ಬೌಲ್‌ಗೆ ಹಾಕಿ. ಅದಕ್ಕೆ ಹೆಚ್ಚಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಅಕ್ಕಿ ಹಿಟ್ಟು, ಜೀರಿಗೆ, ಖಾರದ ಪುಡಿ, ಗರಂ ಮಸಾಲ ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಚೆನ್ನಾಗಿ ಕಲಸಿ. ಕೈಗೆ ಸ್ವಲ್ಪ ಎಣ್ಣೆ ಸವರಿಕೊಂಡು, ಮಿಶ್ರಣವನ್ನು ಸಣ್ಣ ಸಣ್ಣ ಚೌಕಾಕಾರ ಅಥವಾ ಸಿಲಿಂಡರ್ ಆಕಾರದ ನಗ್ಗೆಟ್ಸ್ ರೀತಿ ಮಾಡಿಕೊಳ್ಳಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ, ನಗ್ಗೆಟ್ಸ್‌ಗಳನ್ನು ಮಧ್ಯಮ ಉರಿಯಲ್ಲಿ ಗೋಲ್ಡನ್ ಬ್ರೌನ್ ಬರುವವರೆಗೆ ಗರಿಗರಿಯಾಗಿ ಕರಿಯಿರಿ. ಈಗ ಬಿಸಿಬಿಸಿಯಾದ ಹೆಸರು ಬೇಳೆ ನಗ್ಗೆಟ್ಸ್‌ಗಳನ್ನು ಖಾರವಾದ ಪುದೀನಾ ಚಟ್ನಿ ಅಥವಾ ಟೊಮೆಟೊ ಸಾಸ್ ಜೊತೆ ಸವಿಯಲು ನೀಡಿ!



