ಬೇಸಿಗೆ ಅಂತ ತಂಪು ಪಾನೀಯದ ಮೊರೆ ಹೋಗ್ತೀರಾ? ಜ್ಯೂಸ್‌-ಜಿಲೇಬಿಯಲ್ಲೂ ಕೆಟ್ಟ ಕಲರ್ಸ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೇಸಿಗೆಯಲ್ಲಿ ಸೆಕೆ ಎಂದು ತಂಪು ಪಾನೀಯದ ಮೊರೆ ಹೋಗ್ತೀರಾ? ಹಾಗಿದ್ರೆ ಈ ಸುದ್ದಿ ಮಿಸ್‌ ಮಾಡದೇ ಓದಿ..

ಸಾಮಾಜಿಕ ಜಾಲತಾಣಗಳಲ್ಲಿ ಜಿಲೇಬಿ ಮತ್ತು ಶರಬತ್‌ನಲ್ಲಿ ಕೃತಕ ಬಣ್ಣಗಳ ಬಳಕೆ ಹಾಗೂ ಸ್ವಚ್ಛತೆಯ ಕೊರತೆಯ ಬಗ್ಗೆ ದೂರುಗಳು ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಈ ಕಾರ್ಯಾಚರಣೆಗೆ ಇಲಾಖೆ ಮುಂದಾಗಿದೆ.

ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಆಹಾರ ಗುಣಮಟ್ಟ ಇಲಾಖೆ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮಾದರಿ ಸಂಗ್ರಹಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪ್ರತಿ ಜಿಲ್ಲೆಯ ಅಂಕಿತಾಧಿಕಾರಿಗಳ ವ್ಯಾಪ್ತಿಯಲ್ಲಿ ಜಿಲೇಬಿ ಮತ್ತು ಶರಬತ್‌ನ ತಲಾ 5 ಮಾದರಿಗಳನ್ನು ಸಂಗ್ರಹಿಸುವಂತೆ ಆದೇಶಿಸಲಾಗಿದೆ. ಒಟ್ಟಾರೆ, ರಾಜ್ಯಾದ್ಯಂತ 10 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲು ಯೋಜನೆ ರೂಪಿಸಲಾಗಿದೆ.

ಸಂಗ್ರಹಿಸಿದ ಮಾದರಿಗಳನ್ನು ಮೂರು ದಿನಗಳ ಒಳಗೆ ಪ್ರಯೋಗಾಲಯಕ್ಕೆ ರವಾನಿಸಬೇಕು. ಈ ಮಾದರಿಗಳನ್ನು ವೈಜ್ಞಾನಿಕವಾಗಿ ಪರೀಕ್ಷಿಸಿ, ಕೃತಕ ಬಣ್ಣಗಳ ಬಳಕೆ, ಕಲಬೆರಕೆ, ಮತ್ತು ಸ್ವಚ್ಛತೆಯ ಮಾನದಂಡಗಳನ್ನು ತಪಾಸಣೆ ಮಾಡಲಾಗುವುದು. ಪರೀಕ್ಷಾ ವರದಿಯ ಆಧಾರದ ಮೇಲೆ ಕಾನೂನು ಕ್ರಮ ಜರುಗಿಸಲು ಇಲಾಖೆ ಸಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!