ನಮ್ಮ ದೈನಂದಿನ ಆಹಾರದಲ್ಲಿ ಮಾಂಸ ಪ್ರೋಟೀನ್ ಹಾಗೂ ಇತರ ಪೋಷಕಾಂಶಗಳನ್ನು ಒದಗಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆದರೆ ಇದನ್ನು ಮಿತಿಮೀರಿ ಸೇವಿಸಿದರೆ ದೇಹಕ್ಕೆ ಹಲವು ರೀತಿಯ ತೊಂದರೆಗಳನ್ನು ಉಂಟುಮಾಡಬಹುದು ಎಂಬುದನ್ನು ತಜ್ಞರು ಎಚ್ಚರಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಫಾಸ್ಟ್‌ಫುಡ್ ಹಾಗೂ ನಾನ್‌ವೆಜ್ ಮೆನು ಹೆಚ್ಚಾಗಿ ಜನಪ್ರಿಯವಾಗುತ್ತಿರುವ ಹಿನ್ನೆಲೆಯಲ್ಲಿ, ಅತಿಯಾಗಿ ಮಾಂಸ ಸೇವನೆಯ ಪರಿಣಾಮಗಳ ಬಗ್ಗೆ ಆರೋಗ್ಯ ತಜ್ಞರು ಜಾಗೃತಿ ಮೂಡಿಸಿದ್ದಾರೆ.
ಅತಿಯಾಗಿ ಮಾಂಸ ಸೇವನೆಯಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್ತದೆ. ಇದರ ಪರಿಣಾಮವಾಗಿ ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು. ಜೀರ್ಣಕ್ರಿಯೆಯ ಮೇಲೆ ಒತ್ತಡ ಉಂಟಾಗುವುದರಿಂದ ಹೊಟ್ಟೆ ಉಬ್ಬರ, ಮಲಬದ್ಧತೆ ಕಾಣಿಸಬಹುದು. ಮಾಂಸವನ್ನು ಹೆಚ್ಚಾಗಿ ತಿನ್ನುವ ಅಭ್ಯಾಸ ಕಿಡ್ನಿ ಮೇಲೆ ಒತ್ತಡ ತರುವುದರಿಂದ ಮೂತ್ರಪಿಂಡದ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಅಲ್ಲದೆ ಕೆಲವೊಂದು ಕೆಂಪು ಮಾಂಸಗಳಲ್ಲಿ ಇರುವ ಕೊಬ್ಬು, ದೀರ್ಘಾವಧಿಯಲ್ಲಿ ಕ್ಯಾನ್ಸರ್ ಅಪಾಯವನ್ನೂ ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ಸೂಚಿಸಿವೆ.
ಇದೇ ಸಮಯದಲ್ಲಿ ತಜ್ಞರು, ಮಾಂಸವನ್ನು ಸಂಪೂರ್ಣ ತ್ಯಜಿಸಬೇಕೆಂದು ಹೇಳದೇ, ಮಿತವಾಗಿ ಹಾಗೂ ಸಮತೋಲನ ಆಹಾರದಲ್ಲಿ ಸೇರಿಸಿಕೊಳ್ಳುವುದು ಒಳಿತು ಎಂದು ಸಲಹೆ ನೀಡಿದ್ದಾರೆ. ಮಾಂಸದ ಜೊತೆಗೆ ತರಕಾರಿ, ಹಣ್ಣು ಹಾಗೂ ಧಾನ್ಯಗಳನ್ನು ಸೇರಿಸಿದರೆ ದೇಹಕ್ಕೆ ಬೇಕಾದ ಪೋಷಕಾಂಶಗಳು ಸಮತೋಲನವಾಗಿರುತ್ತವೆ.
ಮಾಂಸ ಸೇವನೆ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತವಷ್ಟೇ, ಅತಿಯಾಗಿ ತಿನ್ನುವುದರಿಂದ ಆರೋಗ್ಯ ಸಮಸ್ಯೆಗಳೂ ಎದುರಾಗುತ್ತವೆ. ಆದ್ದರಿಂದ ಸಮತೋಲನ ಆಹಾರ ಪದ್ಧತಿ ಅನುಸರಿಸುವುದು ಮಾತ್ರವಲ್ಲದೆ, ಮಾಂಸದ ಪ್ರಮಾಣವನ್ನು ನಿಯಂತ್ರಿಸುವುದೇ ಉತ್ತಮ ಎಂದು ವೈದ್ಯರು ಸಲಹೆ ನೀಡುತ್ತಾರೆ.