ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಜನಪ್ರಿಯ ಗ್ಯಾರೆಂಟಿ ಯುವನಿಧಿಗೆ ಅರ್ಜಿ ಸಲ್ಲಿಸೋದಕ್ಕೆ ಈಗಾಗಲೇ ಅವಕಾಶ ನೀಡಲಾಗಿದೆ.
ಈವರೆಗೂ ಯುವನಿಧಿಗಾಗಿ 32,000 ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ ಹೆಚ್ಚು ಅರ್ಜಿಗಳು ಬಂದಿರೋದು ಬೆಂಗಳೂರು ಹಾಗೂ ಬೆಳಗಾವಿಯಿಂದ.
10 ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಿದ್ದರು. ಇದೀಗ 10 ದಿನಗಳಲ್ಲಿ ಇಲ್ಲಿಯವರೆಗೆ 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ.
ಬೆಳಗಾವಿಯಲ್ಲಿ 3,900 ಹಾಗೂ ಬೆಂಗಳೂರಿನಲ್ಲಿ 2,853 ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಹ ಫಲಾನುಭವಿಗಳಲ್ಲಿ ಪದವಿ ಪಡೆದವರಿಗೆ ಮೂರು ಸಾವಿರ ರೂಪಾಯಿ ಹಾಗೂ ಡಿಪ್ಲಮಾ ಮಾಡಿದವರಿಗೆ 1.500 ನಿರುದ್ಯೋಗ ಸಹಾಯಧನ ನೀಡಲಾಗುವುದು.