ಬೆಂಗಳೂರಿನಲ್ಲಿ ಈ ವರ್ಷ ಎಷ್ಟು ಗಣೇಶ ಮೂರ್ತಿಗಳು ವಿಸರ್ಜನೆಯಾಗಲಿವೆ ಗೊತ್ತೇ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ವರ್ಷ ಗಣೇಶೋತ್ಸವ ಸಂದರ್ಭ ಬೆಂಗಳೂರಿನ ಯಡಿಯೂರು ಕೆರೆಯಲ್ಲಿ 1.75 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿತ್ತು. ಈ ವರ್ಷವೂ ಅದೇ ಪ್ರಮಾಣದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯಾಗುವ ನಿರೀಕ್ಷೆ ಇದೆ. ನಗರದ ಅನೇಕ ಮನೆಗಳಲ್ಲಿ ಹಬ್ಬದ ಆಚರಣೆ ಭರ್ಜರಿಯಾಗಿಯೇ ನಡೆಯುತ್ತಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸಹ ಕೊಳಗಳನ್ನು ಸ್ವಚ್ಛಗೊಳಿಸಿ ಮರುಪೂರಣ ಮಾಡಿದ್ದಾರೆ.

ಆದಾಗ್ಯೂ, ಈ ವರ್ಷ ನಿರ್ವಹಣಾ ಕಾರ್ಯಗಳ ಕಾರಣ ಯಡಿಯೂರು ಕೆರೆಯ (ಕಲ್ಯಾಣಿ) ಭಾಗವನ್ನು ಸೆಪ್ಟೆಂಬರ್ 10 ರಂದು ಮುಚ್ಚಲಾಗುತ್ತದೆ. ಸೆಪ್ಟೆಂಬರ್ 11 ರಂದು ತೆರೆಯಲಾಗುತ್ತಿದ್ದು, ವಿಸರ್ಜನಾ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ.

ಕಲ್ಯಾಣಿಯಲ್ಲಿ ವಿಗ್ರಹಗಳ ನಿಮಜ್ಜನಕ್ಕೆ ಸೆಪ್ಟೆಂಬರ್ 7 ರಿಂದ 17 ರವರೆಗೆ 11 ದಿನಗಳ ಕಾಲ ಮಾತ್ರ ಅನುಮತಿ ನೀಡಲಾಗುವುದು.

ಮೂರ್ತಿ ವಿಸರ್ಜನೆಗಾಗಿ ಗುರುತಿಸಲಾದ 40ಕ್ಕೂ ಹೆಚ್ಚಿನ ಕೆರೆಗಳಲ್ಲಿ ಬಿಬಿಎಂಪಿ ಸಾಕಷ್ಟು ಸಿದ್ಧತೆಗಳನ್ನು ಮಾಡಿದೆ. ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಕೊಳಗಳಲ್ಲಿ ಜನಸಂದಣಿಯನ್ನು ತಪ್ಪಿಸಲು, ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ 400 ಕ್ಕೂ ಹೆಚ್ಚು ಮೊಬೈಲ್ ಇಮ್ಮರ್ಶನ್ ಟ್ಯಾಂಕ್‌ಗಳನ್ನು ನಿಯೋಜಿಸಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!