ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುನಿರೀಕ್ಷಿತ ಗ್ಯಾರೆಂಟಿಯಾದ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನದಂದು ಬರೋಬ್ಬರು 55 ಸಾವಿರ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತ ವಿದ್ಯುತ್‌ಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಮೊದಲೇ ದಿನವೇ 55 ಸಾವಿರ ಮಂದಿ ಫ್ರೀ ಕರೆಂಟ್‌ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ಸಲ್ಲಿಕೆಯಲ್ಲಿ ಎಸ್ಕಾಂ ಮಾಹಿತಿ ಹಾಗೂ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗಿದೆ. ಸಂವಹನಕ್ಕಾಗಿ ದೂರವಾಣಿ ಸಂಖ್ಯೆಯನ್ನೂ ನಮೂದಿಸಬೇಕಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸದ್ಯಕ್ಕೆ ಯಾವುದೇ ಡೆಡ್‌ಲೈನ್ ಇಲ್ಲ. ಇಡೀ ವರ್ಷ ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.