ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಗುಜರಾತ್ನ ಕೆವಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಈವರೆಗೆ 50 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಜರಾತ್ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ ಮತ್ತು ಪರಿಸರ) ರಾಜೀವ್ ಗುಪ್ತ ಈ ಕುರಿತು ಟ್ವೀಟ್ ಮಾಡಿದ್ದು, ಏಕತಾ ಪ್ರತಿಮೆಯು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿದೆ. ಇದು ಎಲ್ಲಾ ವಯಸ್ಸಿನವರನ್ನೂ ತನ್ನತ್ತ ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ.
ಕೆಲವು ತಿಂಗಳ ಹಿಂದಷ್ಟೆ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಗೆ ಸಂಪರ್ಕ ಸೌಲಭ್ಯ ಒದಗಿಸುವ 8 ರೈಲುಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿದ್ದರು.