ನೀತಿ ಸಂಹಿತೆ ಜಾರಿ ಬಳಿಕ ಇಂದಿನವರೆಗೆ ಪೊಲೀಸರು ವಶಪಡಿಸಿಕೊಂಡ ನಗನಗದು ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ನೀತಿ ಸಂಹಿತೆ ಜಾರಿಯ ಬಳಿಕ ರಾಜ್ಯದಲ್ಲಿ ಇದುವರೆಗೆ 5.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದಾದ್ಯಂತ ಪೊಲೀಸರು ಚುನಾವಣಾ ಅಕ್ರಮಗಳು ನಡೆಯದಂತೆ ಎಲ್ಲೆಡೆ ಹದ್ದಿನಕಣ್ಣಿರಿಸಿದ್ದಾರೆ. ಹೀಗಿದ್ದೂ ನಿಯಮ ಉಲ್ಲಂಘಿಸುವ ಪ್ರಕರಣಗಳು ದಿನನಿತ್ಯ ವರದಿಯಾಗುತ್ತಲೇ ಇದೆ.

ಪೊಲೀಸರು ಈಗಾಗಲೇ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ಎಲ್ಲಾ ಚಲನವಲನಗಳ ಮೇಲೆ ನಿಗಾ ಇರಿಸಿದ್ದಾರೆ. ಹೀಗಿದ್ದೂ ನಗದು ಸಾಗಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬುದಕ್ಕೆ ಈ ಅಂಕಿಅಂಶಗಳೇ ಸಾಕ್ಷಿಯಾಗುತ್ತಿವೆ!

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!