ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಹಬ್ಬ ದಸರಾಗಾಗಿ ಈಗಾಗಲೇ ತಯಾರಿ ಶುರುವಾಗಿದೆ. ಮೈಸೂರಿನಲ್ಲಿ ಸಿದ್ಧತೆಗಳು ಜೋರಾಗಿ ಸಾಗಿವೆ. ದಸರಾ ಮಹೋತ್ಸವದಲ್ಲಿ ಭಾಗವಹಿಸಲಿರುವ ಆನೆಗಳು ಅರಮನೆ ಪ್ರವೇಶಿಸಿವೆ. ಅವುಗಳಿಗೆ ತರಬೇತಿ ನೀಡಲಾಗುತ್ತಿದೆ.
ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಬರೋಬ್ಬರಿ 5,560 ಕೆಜಿ ತೂಕ ಹೊಂದಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ದಸರಾ ಗಜಪಡೆಗೆ ಪ್ರತಿನಿತ್ಯ ಎರಡು ಬಾರಿ ಪೌಷ್ಠಿಕ ಆಹಾರ ಪೂರೈಕೆ ಮಾಡಲಾಗುತ್ತಿದೆ.ಆನೆಗಳ ತೂಕ ಹೆಚ್ಚಿಸಲು ಮತ್ತು ಅವುಗಳ ಆರೋಗ್ಯದ ಹಿತದೃಷ್ಟಿಯಿಂದ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. ವಿವಿಧ ಬಗೆಯ ಧಾನ್ಯಗಳನ್ನು ಬೇಯಿಸಿ ಅದಕ್ಕೆ ತರಕಾರಿಗಳನ್ನು ಮಿಶ್ರಣ ಮಾಡಿ ಪ್ರತಿನಿತ್ಯ 2 ಬಾರಿ ವಿಶೇಷ ಆಹಾರ ನೀಡಲಾಗುತ್ತಿದೆ.
ಪ್ರತಿ ನಿತ್ಯ ಒಂದು ಗಂಡು ಆನೆಗೆ 650 ರಿಂದ 750 ಕೆಜಿ ಆಹಾರ ಕೊಡಲಾಗುತ್ತಿದೆ. ಹೆಣ್ಣು ಆನೆಗೆ 450 ರಿಂದ 500 ಕೆಜಿ ಆಹಾರ ನೀಡಲಾಗುತ್ತಿದೆ. ಒಂದು ಆನೆಗೆ ಪ್ರತಿನಿತ್ಯ 6 ರಿಂದ 7 ಕೆಜಿ ಪ್ರೋಟಿನ್ ಯುಕ್ತ ಆಹಾರ ನೀಡಲಾಗುತ್ತಿದೆ.
ಭತ್ತ, ಗೋಧಿ, ಬೇಳೆ, ಬೆಲ್ಲ, ತರಕಾರಿ, ಬೆಣ್ಣೆ ಮಿಶ್ರಿತ ಆಹಾರವನ್ನು ನೀಡಲಾಗುತ್ತಿದೆ. ಅದರಲ್ಲೂ ಆನೆಗಳಿಗೆ ಬೇಯಸಿದ ವಿಶೇಷ ಆಹಾರ ನೀಡಿ ಅವುಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ.