ಮಹಾಕುಂಭ ಮೇಳದಿಂದ ಉತ್ತರ ಪ್ರದೇಶ ಆರ್ಥಿಕತೆಗೆ ಹರಿದು ಬಂದ ಮೊತ್ತವೆಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ ಯಶಸ್ಸನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಈ ಆಧ್ಯಾತ್ಮಿಕ ಉತ್ಸವದಿಂದ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಹರಿದು ಬಂದಿದೆ ಎಂದು ಶುಕ್ರವಾರ ಹೇಳಿದ್ದಾರೆ.

ಪ್ರಸ್ತುತ ಬಜೆಟ್ ಅಧಿವೇಶನದಲ್ಲಿ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಅವರ ಪ್ರಶ್ನೆಗೆ ಉತ್ತರಿಸಿದ ಯೋಗಿ ಆದಿತ್ಯನಾಥ್, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದರು.

“ಪ್ರಧಾನಿ ಮೋದಿಯವರ ನೇತೃತ್ವದಲ್ಲಿ, 10 ವರ್ಷಗಳಲ್ಲಿ, ನಾವು 25 ಕೋಟಿ ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತರಲು ಸಾಧ್ಯವಾಯಿತು ಮತ್ತು ಕಳೆದ ಎಂಟು ವರ್ಷಗಳಲ್ಲಿ, ನಮ್ಮ ಸರ್ಕಾರ ಆರು ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಹೊರತಂದಿದೆ. ಇದು ಪ್ರತಿಯೊಂದು ವಲಯದಲ್ಲೂ ಬದಲಾವಣೆಗಳಾಗಿವೆ ಎಂದು ತೋರಿಸುತ್ತದೆ ಎಂದರು.

ದೇಶ ಮತ್ತು ಜಗತ್ತು ಇಂದು ಉತ್ತರ ಪ್ರದೇಶದ ಸಾಮರ್ಥ್ಯವನ್ನು ನೋಡುತ್ತಿದೆ. ಇದು ಮಹಾಕುಂಭದ ಆಯೋಜನೆಯೊಂದಿಗೆ ಸಂಬಂಧ ಹೊಂದಿದೆ. ಮಹಾಕುಂಭವು ಯುಪಿಯ ಆರ್ಥಿಕತೆಯಲ್ಲಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಬೆಳವಣಿಗೆಯನ್ನು ತರಲಿದೆ” ಎಂದು ಸಿಎಂ ಆದಿತ್ಯನಾಥ್ ಹೇಳಿದರು.

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದ ಉಪಕ್ರಮಗಳ ಬಗ್ಗೆಯೂ ಒತ್ತಿ ಹೇಳಿದ ಅವರು, ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಶೇಕಡಾ 20 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

“ನಮ್ಮ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಕೆಲಸ ಮಾಡಿದೆ. ಯುಪಿ ಪೊಲೀಸರಲ್ಲಿ, ಶೇಕಡಾ 20 ರಷ್ಟು ನೇಮಕಾತಿಗಳು ಮಹಿಳೆಯರದ್ದಾಗಿವೆ. ಅವರಿಗೆ ಪ್ರತಿಯೊಂದು ವಲಯದಲ್ಲೂ ಉದ್ಯೋಗಾವಕಾಶ ಸಿಕ್ಕಿವೆ” ಎಂದು ಸಿಎಂ ಆದಿತ್ಯನಾಥ್ ಹೇಳಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಅಡಿಯಲ್ಲಿ, ರಾಜ್ಯವು ದೇಶದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು 2029 ರ ವೇಳೆಗೆ ದೇಶದ ಅತಿದೊಡ್ಡ ಆರ್ಥಿಕತೆಯಾಗಿ, ಒಂದು ಟ್ರಿಲಿಯನ್ ಯುಎಸ್ ಡಾಲರ್ ಗುರಿಯನ್ನು ಸಾಧಿಸುವ ಹಾದಿಯಲ್ಲಿದೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!