ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ರಿಯಲ್ ಹೀರೋ ಸೋನು ಸೂದ್ ಚಿತ್ರವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್, ಲಾಕ್ ಡೌನ್ ಸಮಯದಲ್ಲಿ ಬಡಪರ ಪಾಲಿಗೆ ‘ರಿಯಲ್ ಹೀರೋ’ ಆಗಿರುವ ಸೋನು ಸೂದ್, ಚಿತ್ರವೊಂದಕ್ಕೆ ಎಷ್ಟು ಸಂಭಾವನೆ ಪಡೆಯುತ್ತಾರೆಂಬ ವಿಷಯ ಚರ್ಚೆಗೆ ಗ್ರಾಸವಾಗಿದೆ.

ಕಷ್ಟ ಎಂದವರಿಗೆ ತನ್ನ ಆಸ್ತಿ ಮಾರಿಯಾದರೂ ಸಹಾಯ ಮಾಡುವ ಸೋನು ಸೂದ್, ಎಷ್ಟು ಸಂಭಾವನೆ ಪಡೆಯುತ್ತಾರೆಂಬ ಕ್ಯೂರಿಯಾಸಿಟಿ ಎಲ್ಲರಿಗೂ ಇದೆ.  ಕೆಲ ವರದಿಗಳ ಪ್ರಕಾರ,  ಇದೇ ವರ್ಷಾರಂಭದಲ್ಲಿ ತೆರೆಕಂಡ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ನಟನೆಯ ‘ಅಲ್ಲುಡು ಅದುರ್ಸ್’ ಚಿತ್ರದಲ್ಲಿ ಸೋನು ಸೂದ್ 2.5 ಕೋಟಿ ರೂಪಾಯಿಯನ್ನು ಸಂಭಾವನೆಯಾಗಿ ಪಡೆದಿದ್ದರಂತೆ.

ಇದೀಗ ತಮ್ಮ ಸಂಭಾವನೆಯನ್ನು ಹೆಚ್ಚಸಿಕೊಂಡಿದ್ದಾರೆಂಬ ಗುಸುಗುಸು ಕೇಳಿ ಬರುತ್ತಿದೆ.” ಸೋನು ಸೂದ್‌ಗೆ ಹೆಚ್ಚಿನ ಸಂಭಾವನೆ ನೀಡಿದರೆ ನಷ್ಟವೇನಿಲ್ಲ. ಅವರು ಬಡವರಿಗೆ ಸಹಾಯ ಮಾಡುತ್ತಾರೆ” ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss