ಮಾ.28ರಂದು ಮಂಡನೆಯಾಗುತ್ತಿರುವ ಬಿಬಿಎಂಪಿಯ ಬಜೆಟ್‌ ಮೊತ್ತ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2025-26ನೇ ಸಾಲಿನ ಬಜೆಟ್‌ನ್ನು ಅಂತಿಮವಾಗಿ ಮಾ.28 ರಂದು ಮಂಡಿಸಲು ತೀರ್ಮಾನಿಸಲಾಗಿದ್ದು, ಸುಮಾರು ₹19 ಸಾವಿರ ಕೋಟಿ ಬಜೆಟ್‌ ಮಂಡಿಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಬಿಬಿಎಂಪಿಯ ಅಧಿಕಾರಿಗಳು ಈಗಾಗಲೇ ಸರ್ಕಾರದ ₹7 ಸಾವಿರ ಕೋಟಿ ಅನುದಾನ ನಿರೀಕ್ಷೆ ಇಟ್ಟುಕೊಂಡು ಬಜೆಟ್‌ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಸೋಮವಾರ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಶಾಸಕರ ಸಭೆ ನಡೆಸಲಾದ ಬಳಿಕ ಬಜೆಟ್‌ನಲ್ಲಿ ಸಾಕಷ್ಟು ಬದಲಾವಣೆಗೆ ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮಾ.27ರ ಗುರುವಾರದ ಬದಲಿಗೆ ಮಾ.28ರಂದು ಬೆಳಗ್ಗೆ 11 ಗಂಟೆಗೆ ಪುರಭವನದಲ್ಲಿ ಬಿಬಿಎಂಪಿಯ ಆಡಳಿತಾಧಿಕಾರಿ, ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಬಜೆಟ್‌ ಮಂಡಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here