ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಕಷ್ಟು ತೂಗಿ ಅಳೆದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆಯಷ್ಟೇ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿದ್ದಾರೆ.
ಇದು ಪವರ್‌ಫುಲ್ ಅಭ್ಯರ್ಥಿಗಳ ಪಟ್ಟಿ, ಈ ಪಟ್ಟಿ ನೋಡಿ ಕಾಂಗ್ರೆಸ್ ನಾಯಕರ ಎದೆ ನಡುಗಿದೆ ಎಂದು ಹೇಳಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಖಚಿತ. ಸಂಪೂರ್ಣ ಬಹುಮತದಿಂದ ಬಿಜೆಪಿ ಆಯ್ಕೆಯಾಗಲಿದೆ, ಅನುಮಾನ ಇದ್ದವರು ಇನ್ನೊಮ್ಮೆ ಲಿಸ್ಟ್ ನೋಡಿ ಎಂದಿದ್ದಾರೆ. ಬಿಡುಗಡೆಯಾದ ಪಟ್ಟಿ ನೋಡಿ ಖುಷಿಯಾಗಿದೆ. ಸೂಕ್ತ ಅಭ್ಯರ್ಥಿಗಳನ್ನು ಆರಿಸಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈವರೆಗೂ ಬಿಜೆಪಿಗೆ ಬಹುಮತ ಬಂದಿಲ್ಲ. ಆದರೆ ಈ ಬಾರಿ ಪೂರ್ಣ ಬಹುಮತ ಬರುವ ಎಲ್ಲ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.