ಹೇಗೆ ಸಾಗುತ್ತಿದೆ ಗೊತ್ತಾ ಬುಲೆಟ್‌ ರೈಲು ಕಾಮಗಾರಿ?: ಇಲ್ಲಿದೆ ನೋಡಿ ಪ್ರಗತಿಯ ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಕನಸಿನ ಬುಲೆಟ್‌ ರೈಲು ಯೋಜನೆಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಗತಿಯ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಮುಂಬೈ ಮತ್ತು ಅಹಮದಾಬಾದ್‌ ನಡುವಿನ ಯೋಜನೆ ಇದಾಗಿದ್ದು, ಮೊದಲ ಬಾರಿಗೆ ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಬ್ಯಾಲೆಸ್ಟೆಲೆಸ್‌ ಟ್ರ್ಯಾಕ್‌ ನಿರ್ಮಾಣ ಮಾಡಲಾಗುತ್ತಿದೆ.
ಈ ಟ್ರ್ಯಾಕ್‌ ಮೇಲೆ ಬುಲೆಟ್‌ ರೈಲು ಗಂಟೆಗೆ 320 ಕಿ.ಮೀ ವೇಗದಲ್ಲಿ ಚಲಿಸಲಿದೇ ಎಂದು ಅವರು ಮಾಹಿತಿ ನೀಡಿದ್ದಾರೆ.

ಮುಂಬೈ ಮತ್ತು ಅಹಮದಾಬಾದ್‌ ನಡುವಿನ 508 ಕಿ.ಮೀ ಪೈಕಿ 153 ಕಿ.ಮೀಟರ್‌ನಷ್ಟು ಸೇತುವೆ ಕಾಮಗಾರಿ ಹಾಗೂ 295 ಕಿ.ಮೀಟರ್‌ನಷ್ಟು ಟ್ರ್ಯಾಕ್‌ ಅಡಿಪಾಯದ ಸೀಲಿಂಗ್‌ ಕಾಮಗಾರಿ ಫೂರ್ಣಗೊಂಡಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಮೋದಿ 3.0 ಸರ್ಕಾರದ ಅವಧಿಯಲ್ಲಿ ನೀಡಲಾಗುವುದು ಎಂದು ಅವರು ಪೋಸ್ಟ್‌ ಮಾಡಿದ್ದಾರೆ.

ಜಪಾನ್‌ ದೇಶದ ನೆರವಿನೊಂದಿಗೆ ₹ 1.08 ಲಕ್ಷ ಕೋಟಿ ವೆಚ್ಚದಲ್ಲಿ ಈ ಯೋಜನೆ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರ ₹ 10 ಸಾವಿರ ಕೋಟಿ, ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ತಲಾ ₹ 5 ಸಾವಿರ ಕೋಟಿ ನೀಡುತ್ತಿವೆ. ಉಳಿದ ಹಣವನ್ನು ಕಡಿಮೆ ಬಡ್ಡಿ ದರದಲ್ಲಿ ಜಪಾನ್‌ ಸರ್ಕಾರ ನೀಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!