Sunday, March 26, 2023

Latest Posts

ಮಹಿಳೆಯರ ದಿನದಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಮಾಡಿದ್ದು ಬರೋಬ್ಬರಿ 21 ಲಕ್ಷ ಮಂದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶವನ್ನು ನೀಡಲಾಗಿತ್ತು. ಮಹಿಳೆಯರು ಈ ಅವಕಾಶವನ್ನು ಬಳಸಿಕೊಂಡಿದ್ದು, ಬರೋಬ್ಬರಿ 21ಲಕ್ಷಕ್ಕೂ ಹೆಚ್ಚು ಮಹಿಳೆಯರು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ.

ಒಟ್ಟಾರೆ 21.97 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ಬಿಎಂಟಿಸಿ ಮಾಹಿತಿ ನೀಡಿದೆ. ಬಸ್ ನಿಗಮದ ನಿರೀಕ್ಷೆಗಿಂತ ಎರಡು ಲಕ್ಷ ಹೆಚ್ಚು ಮಹಿಳೆಯರು ಪ್ರಯಾಣ ಬೆಳೆಸಿದ್ದಾರೆ.

ಬಸ್ ನಿಗಮದ ಅಂದಾಜಿನ ಪ್ರಕಾರ 20 ಲಕ್ಷ ಮಹಿಳೆಯರು ಸೇವೆ ಬಳಸುವ ನಿರೀಕ್ಷೆ ಇತ್ತು. ಇದರಿಂದ ಸರ್ಕಾರಕ್ಕೆ 8.17 ಕೋಟಿ ರೂಪಾಯಿ ವೆಚ್ಚ ತಗುಲಬಹುದು ಎನ್ನಲಾಗಿತ್ತು. ಆದರೆ ಇದೀಗ ಎಷ್ಟು ನಷ್ಟವಾಗಿದೆ ಎನ್ನುವ ಮಾಹಿತಿ ಬಹಿರಂಗಪಡಿಸಿಲ್ಲ. ಪುರುಷರೂ ಸೇರಿ ಒಟ್ಟಾರೆ 33 ಲಕ್ಷ ಪ್ರಯಾಣಿಕರು ಬಿಎಂಟಿಸಿ ಬಳಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!