ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 7, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬೆಳಗ್ಗೆ ಬಿಸಿ ನೀರಿನ ಜೊತೆ ಸೇವಿಸಿ ಒಂದು ಚಮಚ ಬೆಲ್ಲ.. ಯಾಕೆ ಗೊತ್ತಾ? ಇಲ್ಲಿದೆ ನೋಡಿ..

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………………………. 

ಹಿಂದಿನ ಕಾಲದಲ್ಲಿ ಹಿರಿಯರು ಬೆಳಗ್ಗೆ ಉಗುರು ಬಿಸಿ ನೀರು ಕುಡಿಯುವಾಗ ಬೆಲ್ಲ ಸೇವಿಸುತ್ತಿದ್ದರು. ಬೆಳಗ್ಗೆ ಒಂದೇ ಅಲ್ಲ ಊಟದ ನಂತರವೂ ಬೆಲ್ಲ ತಿನ್ನುತ್ತಿದ್ದರು. ನಿಮ್ಮ ಮನೆಯಲ್ಲಿ ಅಜ್ಜ, ಅಜ್ಜಿ ಇದ್ದರೆ ನೀವು ಗಮನಿಸಿ. ಆದರೆ ಏಕೆ ಬೆಲ್ಲ ತಿನ್ನುತ್ತಿದ್ದರು ಎಂಬುದು ಹಲವರಿಗೆ ಗೊತ್ತಿಲ್ಲ. ಹೆಚ್ಚು ಬೆಲ್ಲ ತಿನ್ನುವುದರಿಂದ ನಮ್ಮ ದೇಹಕ್ಕೆ ಬಹಳಷ್ಟು ಲಾಭವಿದೆ. ಹಾಗಾಗಿ ಅವರು ಬೆಲ್ಲ ಸೇವಿಸುತ್ತಿದ್ದರು.

ವಿಷಕಾರಿ ರಾಸಾಯನಿಕ:
ಬೆಲ್ಲವು ಮೂತ್ರಪಿಂಡದಲ್ಲಿರುವ ವಿಷಕಾರಿ ರಾಸಾಯನಿಕಗಳನ್ನು ಹೊರ ಹಾಕಲು ನೆರವಾಗುತ್ತದೆ. ದೇಹದಿಂದ ಪರಿಣಾಮಕಾರಿಯಾಗಿ ವಿಷನಿವಾರಿಸಬೇಕೆಂದಲ್ಲಿ ಬೆಲ್ಲ ತಿನ್ನಿ.

ಮಲ ಬದ್ಧತೆ:
ಬೆಲ್ಲ ದೇಹದಲ್ಲಿ ಜೀರ್ಣಕ್ರಿಯೆಗೆ ನೆರವಾಗುವ ಎನ್‌ಜೈಮ್‌ಗಳನ್ನು ಸಕ್ರಿಯಗೊಳಿಸುತ್ತದೆ. ಜಠರದ ಚಲನೆಗೆ ನೆರವಾಗಿ ಮಲಬದ್ಧತೆಯಿಂದ ರಕ್ಷಿಸುತ್ತದೆ. ಜೀರ್ಣಕ್ರಿಯೆ ಸರಿಯಾಗುತ್ತದೆ. ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ರಕ್ತ ಶುದ್ಧೀಕರಣ:
ಬೆಲ್ಲದ ಅತೀ ಪ್ರಸಿದ್ಧ ಲಾಭವೆಂದರೆ ರಕ್ತ ಶುದ್ಧೀಕರಣ. ನಿತ್ಯವೂ ಸೀಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ರಕ್ತ ಶುದ್ಧವಾಗಿ ದೇಹವನ್ನು ಆರೋಗ್ಯವಾಗಿಡುತ್ತದೆ.

ಹಿಮೋಗ್ಲೋಬಿನ್:
ಬೆಲ್ಲದಲ್ಲಿ ಹಲವು ಆಂಟಿ ಆಕ್ಸಿಡೆಂಟ್‌ಗಳು ಮತ್ತು ಲವಣಗಳಾದ ಸತು ಮತ್ತು ಸೆಲೆನಿಯಂ ಇವೆ. ಇವು ಸೋಂಕುಗಳ ವಿರುದ್ಧವೂ ನೆರವಾಗುತ್ತದೆ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ ಏರಿಸಲೂ ಬೆಲ್ಲ ನೆರವಾಗುತ್ತದೆ.

ಸ್ವಚ್ಛ:
ಬೆಲ್ಲ ಒಂದು ಅತೀ ಸಹಜವಾದ ದೇಹ ಸ್ವಚ್ಛಗೊಳಿಸುವ ಸಾಧನ. ಹೀಗಾಗಿ ಬೆಲ್ಲ ಸೇವಿಸುವುದು ದೇಹದಿಂದ ಅನಗತ್ಯ ಕಣಗಳನ್ನು ನಿವಾರಿಸುತ್ತದೆ. ಶ್ವಾಸಕೋಶ, ಶ್ವಾಸನಾಳ, ಕರುಳು, ಹೊಟ್ಟೆ ಮತ್ತು ಅನ್ನನಾಳವನ್ನು ಸ್ವಚ್ಛಗೊಳಿಸುತ್ತದೆ.

ಹೊಟ್ಟೆ ನೋವು:
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ  ಹೊಟ್ಟೆನೋವಿಗೆ ಬೆಲ್ಲ ಪರಿಹಾರ ನೀಡುತ್ತದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss