ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ದರ್ಶನ್ ಗೆ ಸದ್ಯ ರಿಲೀಫ್ ಸಿಕ್ಕಿದೆ. ನ್ಯಾಯಾಲಯ ದರ್ಶನ್ ಅವರಿಗೆ ಆರು ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.
ಬೆನ್ನು ನೋವಿನಿಂದ ಬಳಲುತ್ತಿದ್ದ ನಟ ದರ್ಶನ್ ಅವರಿಗೆ ಚಿಕಿತ್ಸೆಗಾಗಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ನಟ ದರ್ಶನ್ 131 ದಿನಗಳ ಹಿಂದೆ ಜೈಲಿಗೆ ಹೋಗಿದ್ದರು. ಅಂತೂ ಇಂತೂ ಇದೀಗ ಸೆರೆವಾಸದಿಂದ ಮುಕ್ತಿ ಪಡೆಯಲಿದ್ದಾರೆ.
ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಿಚಾರ ತಿಳಿದ ದರ್ಶನ್ ಭಾವುಕರಾಗಿದ್ದಾರೆ. ಸಂತಸದ ಭಾವವನ್ನೂ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜೈಲು ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ ಎನ್ನಲಾಗಿದೆ.
ತಮ್ಮ ಕೈಲಾದ ಆರೈಕೆ ಮಾಡಿದ ಸಿಬ್ಬಂದಿಗೆ ದರ್ಶನ್ ಧನ್ಯವಾದ ಹೇಳಿದ್ದಾರೆ. ಇದಾದ ಬಳಿಕ ಸೆಲ್‌ಗೆ ಬಂದು ಭಾವುಕರಾಗಿದ್ದಾರೆ ಅಂತ ಹೇಳಲಾಗ್ತಿದೆ.