ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಪಿಎ ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್ ಮೊದಲು ನೋಡಿಕೊಳ್ಳಲಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
2004ರಿಂದ 2014ರವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಯುಪಿಎ ಅಧಿಕಾರದಲ್ಲಿದ್ದಾಗ ಒಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,241 ರೂ. ಇತ್ತು. ಈಗ ನರೇಂದ್ರ ಮೋದಿ ಸರ್ಕಾರದಲ್ಲಿ 854 ರೂ. ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಕಿಡಿಕಾರಿದ್ದಾರೆ.